ಕರಾವಳಿ

ಉಡುಪಿ ನೇಜಾರು ಮರ್ಡರ್ ಕೇಸ್: ಆರೋಪಿ ಪ್ರವೀಣ್‌ ಚೌಗಲೆ ಬೆಂಗಳೂರು ಪರಪ್ಪನ ಅಗ್ರಹಾರ‌ ಜೈಲಿಗೆ ಶಿಪ್ಟ್

Pinterest LinkedIn Tumblr

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗಲೆಯನ್ನು ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸೋಮವಾರ ರವಾನಿಸಲಾಗಿದೆ.

ಪೊಲೀಸ್‌ ಕಸ್ಟಡಿಯಲ್ಲಿದ್ದ ಆತನನ್ನು ನ.23ರಂದು ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ ಅವರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಅದರಂತೆ ಡಿ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿತ್ತು. ಬಳಿಕ ಆತನನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿತ್ತು.

ಭದ್ರತೆಗಾಗಿ ಇಬ್ಬರು ಪೊಲೀಸರನ್ನೂ ನಿಯೋಜಿಸಲಾಗಿತ್ತು. ಆದರೆ ಮತ್ತಷ್ಟು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆದು ಕೇಂದ್ರ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಮುಂದಿನ ವಿಚಾರಣೆ ಪ್ರಕ್ರಿಯೆಗಳು ವೀಡಿಯೋ ಸಂವಾದದ ಮೂಲಕ ನಡೆಯಲಿದೆ. ಬಹುತೇಕ ಎಲ್ಲಾ ಪ್ರಕ್ರಿಯೆಗಳೂ ವಿಸಿ (ವಿಡಿಯೋ ಕಾನ್ಪರೆನ್ಸ್) ಮೂಲಕ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Comments are closed.