ಹಾಸನ: ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದರಿಂದ ಹೊಟ್ಟೆಗೆ ತಿವಿಸಿಕೊಂಡು ಮೃತಪಟ್ಟಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎನ್ನಲಾಗಿದೆ.
ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದ್ದು ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಕೂಡ ಇಳಿದಿದ್ದರು ಎನ್ನಲಾಗಿದೆ. ಕಾಡಾನೆ ದಾಳಿಯಿಂಷ ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
22 ವರ್ಷಗಳ ಕಾಲ ದಸರಾದಲ್ಲಿ ಭಾಗವಹಿಸಿದ್ದ ಸಾಕಾನೆ ಅರ್ಜುನ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದು ಇನ್ನೂ ನೆನಪು ಮಾತ್ರ. ಈ ಬಾರೀ ಜಂಬೂಸವಾರಿಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಭಾಗಿಯಾಗಿದ್ದು ಅರ್ಜುನ ಆನೆಗೆ 65 ವರ್ಷ ವಯಸ್ಸಾಗಿತ್ತು. 288ಮೀ ಎತ್ತರ, 5800 ರಿಂದ 6000 ಕೆ.ಜಿ. ತೂಕ ಇರುವುದು ಇತ್ತೀಚೆಗೆ ದಸರಾದಲ್ಲಿ ಭಾಗವಹಿಸಿದ್ದ ಸಂದರ್ಭ ತಿಳಿದುಬಂದಿತ್ತು.
Comments are closed.