ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಿಕ್ಕಂತಾಗಿದೆ. ಈ ಹಿಂದೆ ಹೊಸಕೋಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು.
Comments are closed.