ಕರಾವಳಿ

ಮಹಿಳೆಯಿಂದ ಲಂಚ ಸ್ವೀಕಾರ ಆರೋಪ; ಲೋಕಾಯುಕ್ತ ಪೊಲೀಸರಿಂದ ಬೇಳೂರು ಪಿಡಿಓ ಅರೆಸ್ಟ್

Pinterest LinkedIn Tumblr

ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು 4 ಕಂತಿನಲ್ಲಿ 1.20 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಬಿಡುಗಡೆಯಾದ ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು 10 ಸಾವಿರ ಹಣ ಖರ್ಚಾಗಿದೆ. ಆ ಹಣವನ್ನು ಮರಳಿ ನೀಡುವಂತೆ ಆರೋಪಿ ಲಂಚ ಬೇಡಿಕೆಯನ್ನು ಇಟ್ಟಿದ್ದರು.

ಇನ್ನು ಆ ಬಳಿಕ ಆರೋಪಿ ಲಂಚ ಬೇಡಿಕೆ ಇಟ್ಟ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯು ತೆಕ್ಕಟ್ಟೆ ಜಂಕ್ಷನ್‌ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Comments are closed.