ಉಡುಪಿ: ಸಮಾಜ ಸೇವಕ, ಹಿರಿಯ ರಂಗ ಕಲಾವಿದ, ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ (68) ಅವರು ಪತ್ನಿ ವಸುಂಧರಾ ಶೆಟ್ಟಿ (58) ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಸಾವಿನ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿವೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಮುಂದುವರಿಸಿದ್ದಾರೆ.
ಲೀಲಾಧರ ಶೆಟ್ಟಿ ಅವರ ಅಕಾಲಿಕ ಮರಣ ಕಾಪುವಿನ ಜನತೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ನೂರಾರು ಮಂದಿ ಸಂಬಂಧಿಕರು, ಅಭಿಮಾನಿಗಳು, ಹಿತೈಷಿಗಳು ಮನೆ ಮತ್ತು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು ಬುಧವಾರ ಸಂಜೆ 4 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments are closed.