ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಯು ಈಗಾಗಲೇ ಹಲವಾರು ಸಾಂಸ್ಕೃತಿಕ,ಸಾಹಿತ್ಯಕ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಥಮ ಸ್ಥಾನಗಳನ್ನು ಪಡೆದು ಸಾಧನೆ ಮೆರೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Comments are closed.