ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ. ಮೃತಪಟ್ಟ ಕಾರು ಚಾಲಕ ಪ್ರದ್ಯೋತ್ ಎಂದು ಗುರುತಿಸಲಾಗಿದೆ.
ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ವೇಳೆ ನುಜ್ಜುಗುಜ್ಜಾದ ಕಾರಿನೊಳಗೆ ಸಿಲುಕಿದ್ದ ಕಾರಿನ ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಬೈಂದೂರು ಠಾಣಾ ಪಿಎಸ್ಐ ತಿಮ್ಮೇಶ್ ಬಿ.ಎನ್ ಮತ್ತು ಸಿಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments are closed.