ಬೆಂಗಳೂರು: ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ.
ಉಚಿತ ವಿದ್ಯುತ್ ಯೋಜನೆಯ ಗೃಹಜ್ಯೋತಿಯಲ್ಲಿ ಶೇಕಡ 10ರಷ್ಟು ಹೆಚ್ಚುವರಿ ಉಚಿತ ವಿದ್ಯುತ್ ಬದಲಾಗಿ 10ಯುನಿಟ್ ನೀಡಲು ಇಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಈ ಮೊದಲು ಗೃಹ ಜ್ಯೋತಿ ಯೋಜನೆಯಲ್ಲಿ ಸರಾಸರಿ ವಿದ್ಯುತ್ ಬಳಕೆಯಲ್ಲಿ ಶೇ. 10ರಷ್ಟು ಹೆಚ್ಚುವರಿ ಉಚಿತ ವಿದ್ಯುತ್ ಬಳಕೆಗೆ ಅರ್ಹರು ಎಂದು ಪರಿಗಣಿಸಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
Comments are closed.