(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಮದುವೆ ನಿಮಿತ್ತ ಖರೀದಿಸಿ ತಂದು ಬ್ಯಾಗಿನಲ್ಲಿಟ್ಟು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪೂಜೆಗೆ ಹೋಗಿದ್ದಾಗ ಬ್ಯಾಗಿನಲ್ಲಿದ್ದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಣಭರಣವಿದ್ದ ಪರ್ಸ್ ಕಳವುಗೈದ ಘಟನೆ ಡಿ.27ರಂದು ನಡೆದಿದ್ದು ಈ ಬಗ್ಗೆ ಜ.14ರಂದು ದೂರು ದಾಖಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಪೊಲೀಸರ ತಂಡವು ಸಿಸಿ ಟಿವಿ ಮತ್ತು ಇತರ ತಾಂತ್ರಿಕ ದಾಖಲೆ ವಿಶ್ಲೇಷಣೆ ಮೂಲಕ ಪ್ರಕರಣ ದಾಖಲಾದ ಮೂರು ದಿನದಲ್ಲಿ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಬೆಂಡಗೇರಿ ಮೂಲದವರಾದ ಬೀಬಿ ಜಾನ್ (58), ಪಾರವ್ವ (54) ಎನ್ನುವರನ್ನು ಬಂಧಿಸಿದ್ದು ಕಳವುಗೈದ 3.5 ಲಕ್ಷ ಮೌಲ್ಯದ 51.900 ಗ್ರಾಂ ತೂಕದ ಚಿನ್ನದ ಕರಿಮಣಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಪರಮೇಶ್ವರ ಹೆಗಡೆ, ಎಸ್.ಟಿ ಸಿದ್ಧಲಿಂಗಪ್ಪ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ಯು.ಬಿ. ನಂದಕುಮಾರ್, ಉಪ ನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ, ಕ್ರೈಂ ವಿಭಾಗದ ಪಿಎಸ್ಐ ಪ್ರಸಾದ್ ಕುಮಾರ್ ಕೆ., ಸಿಬ್ಬಂದಿಗಳಾದ ಸಂತೋಷ್ ಕುಮಾರ್, ಶ್ರೀಧರ್, ರಾಮ ಪೂಜಾರಿ, ಮೋನಿಕಾ, ಪದ್ಮಾವತಿ ಕಾರ್ಯಾಚರಣೆ ನಡೆಸಿದ್ದರು.
Comments are closed.