ಅಯೋಧ್ಯೆ: ಅಯೋಧ್ಯೆಯ ನೂತನ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲಾನ ವಿಧ್ಯುಕ್ತ ಪ್ರತಿಷ್ಠಾಪನೆಯ ಬಳಿಕ ಪೇಜಾವರದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳವರ ನೇತೃತ್ವದಲ್ಲಿ ಮಂಗಳವಾರದಿಂದ 48 ದಿನಗಳ ಕಾಲ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ.
ಪೇಜಾವರದ ಶ್ರೀಗಳು ಮಂಗಳವಾರ ವಿವಿಧ ಮಂತ್ರಗಳಿಂದ ರಾಮಲಲಾನಿಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಹಾಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.
ಈ ವಿಡಿಯೋ ಇದೀಗಾ ವೈರಲ್ ಆಗಿದ್ದು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
Comments are closed.