ಕರಾವಳಿ

ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಶಿವಪ್ರಸಾದ್‌ ಆಳ್ವ ನೇಮಕ

Pinterest LinkedIn Tumblr

ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ ಉಡುಪಿ ಜಿಲ್ಲೆಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಿರಿಯ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಈ ಪ್ರಕಣದಲ್ಲಿ ಸಂಬಂಧಪಟ್ಟ ವಿಚಾರಣೆ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋಜಿಸಿದೆ.

ಶಿವಪ್ರಸಾದ್ ಆಳ್ವ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸುವಂತೆ ಸಂತ್ರಸ್ತರ ಕುಟುಂಬ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿತ್ತು. ಇದೀಗ ಸರ್ಕಾರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿಶಿವಪ್ರಸಾದ್‌ ಆಳ್ವರ ಅವರನ್ನು ನೇಮಿಸಿದೆ.

ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ನ.12 ರಂದು ಬೆಳಿಗ್ಗೆನ ಹೊತ್ತಿಗೆ ಹಸೀನಾ ಹಾಗೂ ಮಕ್ಕಳಾದ ಅಪ್ನಾನ್, ಅಯ್ನಾಝ್, ಆಸೀಮ್ ಎನ್ನುವರನ್ನು ಏರ್ ಇಂಡಿಯಾ ಉದ್ಯೋಗಿಯಾಗಿದ್ದ ಪ್ರವೀಣ್ ಚೌಗಲೇ ಚೂರಿ ಇರಿದು ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾನೆ. ಇತ್ತೀಚೆಗೆ ತನ್ನ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದು ಅದು ತಿರಸ್ಕೃತಗೊಂಡಿದೆ.

Comments are closed.