ನವದೆಹಲಿ: ಲೋಕಸಭೆ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಭಾಜಪಾ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದು ದಿಡೀರ್ ರಾಜಕೀಯ ಬೆಳವಣಿಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇಂದು (ಗುರುವಾರ) ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.
ದೇಶದ ಹಿತಕ್ಕಾಗಿ ಮತ್ತೆ ಬಿಜೆಪಿ ಸೇರಗಪಡೆಯಾಗುತ್ತಿರುವೆ. ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
Comments are closed.