ಉಡುಪಿ: ಸುಮಾರು 3 ವರ್ಷಗಳ ಹಿಂದೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಇದಾಗಿತ್ತು. 2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಎನ್ನುವ ವಿವಾಹಿತ ಮಹಿಳೆ ಕೊಲೆಯಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಾದ ವಿಶಾಲ ಅವರ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎನ್ನುವರನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿಶಾಲ ಅವರ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದು ಈತನಿಗೂ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ವಿಶಾಲ ಅವರ ಕೊಲೆಗೆ ಸಹಕರಿಸಿದ ಆರೋಪಿಯಾದ ಧರ್ಮೇಂದ್ರ ಕುಮಾರ್ ಸುಹಾನಿ ಬಂಧನವಾಗಿದೆ. ಈತ ಕೊಲೆ ಪ್ರಕರಣ ದಾಖಲಾದ ವಿಚಾರ ತಿಳಿದು, 3 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.
ಬ್ರಹ್ಮಾವರ ಠಾಣಾ ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ (ಎಎಸ್‌ಐ), ಸುರೇಶ ಬಾಬು ಅವರ ತಂಡವು ಜ.2 ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಜ.3ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
*ವಿಶಾಲ ಗಾಣಿಗ ಮರ್ಡರ್ ಕೇಸ್ ಸಂಬಂಧಿತ ಸುದ್ದಿಗಳು:
ಬ್ರಹ್ಮಾವರದ ಅಪಾರ್ಟ್‌ಮೆಂಟ್’ನಲ್ಲಿ ಕುತ್ತಿಗೆಗೆ ವಯರ್ ಬಿಗಿದು ವಿವಾಹಿತ ಮಹಿಳೆಯ ಕೊಲೆ
ಬ್ರಹ್ಮಾವರ ಫ್ಲ್ಯಾಟ್’ನಲ್ಲಿ ಮಹಿಳೆ ಕೊಲೆ ಪ್ರಕರಣದ ತನಿಖೆ ಚುರುಕು; ಸ್ಥಳಕ್ಕೆ ಐಜಿಪಿ ದೇವಜ್ಯೋತಿ ರೇ ಭೇಟಿ
ಫ್ಲ್ಯಾಟ್’ನಲ್ಲಿ ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿ ರಾಮಕೃಷ್ಣ, ಮತ್ತೋರ್ವ ಸುಫಾರಿ ಕಿಲ್ಲರ್ ಬಂಧನ
ಬ್ರಹ್ಮಾವರದಲ್ಲಿ ವಿಶಾಲ ಗಾಣಿಗ ಮರ್ಡರ್ ಕೇಸ್ ತನಿಖೆ: ಉಡುಪಿ ಜಿಲ್ಲಾ ಪೊಲೀಸರ ತಂಡಕ್ಕೆ ನಗದು ಪುರಸ್ಕಾರ
ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣ: ವರ್ಷದಿಂದ ತಲೆ ಮರೆಸಿಕೊಂಡಿದ್ದ ಸುಪಾರಿ ಕಿಲ್ಲರ್ ಬಂಧನ
Comments are closed.