ಕುಂದಾಪುರ: ಇಲ್ಲಿನ ಶ್ರೀ ನಾರಾಯಣಗುರು ರಸ್ತೆಯಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ 23ನೇ ವರ್ಧಂತ್ಯೋತ್ಸವ ಮತ್ತು ಆಯ್ದ ತಂಡಗಳ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.4 ರವಿವಾರ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು.
ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮಾತನಾಡಿ, ನಮ್ಮ ಹಿರಿಯರು ಕಟ್ಟಿದ ಬಿಲ್ಲವ ಸಮಾಜ ಸೇವಾ ಸಂಘ ಅಮೃತ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿದೆ. ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಸಂಘದ 75ನೇ ವರ್ಷದ ಕಾರ್ಯಕ್ರಮ ವಿಜ್ರಂಭಣೆಯಿಂದ ಆಚರಿಸಬೇಕು ಎಂಬುದು ಸಮಾಜದ ಮುಖಂಡರ ಆಶಯವಾಗಿದೆ. ಇದೇ ಹೊತ್ತಿನಲ್ಲಿ ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ 23ನೇ ವರ್ಧಂತ್ಯೋತ್ಸವ ನಡೆಯುತ್ತಿದ್ದು ಈ ಸಲುವಾಗಿ ಮಾ.3 ರಂದು ಆಯ್ದ ತಂಡಗಳ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದರು.
ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಶಿವರಾಮ ಪೂಜಾರಿ ಬಸ್ರೂರು, ರಾಮ ಪೂಜಾರಿ ಮೂಲೆಮನೆ, ಜೊತೆ ಕಾರ್ಯದರ್ಶಿ ಉಮೇಶ್ ಕಡ್ಗಿಮನೆ, ಕೋಶಾಧಿಕಾರಿ ರಮೇಶ ಪೂಜಾರಿ, ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಯೋಗೇಶ್ ಪೂಜಾರಿ ಕೋಡಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್ ಇದ್ದರು.
ಕುಂದಾಪುರ ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರಾಜೇಶ್ ಕಡ್ಗಿಮನೆ ನಿರೂಪಿಸಿದರು.
Comments are closed.