ಬೆಂಗಳೂರು: ಇತ್ತೀಚೆಗೆ ನಡೆದ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ಎನ್ಐಎ ತೀವೃಗೊಳಿಸಿದ್ದು ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಆತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ ಎನ್ಐಎ ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದಲ್ಲದೆ ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇನ್ನು ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್ಐಎ ಹೇಳಿದೆ.
Comments are closed.