ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ ಹೆಗ್ಡೆ ಅವರು ಎ.3 ರ ಬುಧವಾರದಂದು ಬೆಳಿಗ್ಗೆ 11 ರಿಂದ 12 ರ ನಡುವೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಬುಧವಾರ ಬೆಳಗ್ಗೆ 10 ಕ್ಕೆ ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಹಾಗೂ ಪ್ರಮುಖರ ಸಭೆ ನಡೆಯಲಿದೆ. ಬಳಿಕ ಪಕ್ಷದ ಪ್ರಮುಖರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳುವ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆ.ಪಿ. ಹೆಗ್ಡೆಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಅಂದು ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನ ದಲ್ಲಿ ಸಭೆ ನಡೆಸಿ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಕೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿದ್ದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು, ಪಧಾದಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.