ಬೆಂಗಳೂರು: ದೇಶಾದ್ಯಂತ ಇಂದು 2ನೇ ಹಂತದ ಚುನಾವಣೆ ನಡೆಯುತ್ತಿದ್ದು ರಾಜ್ಯ 14 ಸಂಸದೀಯ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೊದಲನೆ ಹಂತದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು- ಕೊಡಗು ಮತ್ತು ಚಾಮರಾಜನಗರ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
2.88 ಕೋಟಿಗೂ ಹೆಚ್ಚು ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.ಚುನಾವಣಾ ಆಯೋಗವು ಕರ್ನಾಟಕದ 14 ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಿದೆ. 1.9 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಅಧಿಕಾರಿಗಳು, 5,000 ಮೈಕ್ರೋ ಅಬ್ಸರ್ವರ್‌ಗಳು, 65 ಪ್ಯಾರಾ ಮಿಲಿಟರಿ ತಂಡಗಳು ಮತ್ತು 50,000 ಪೊಲೀಸ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಕರ್ನಾಟಕದ ದಕ್ಷಿಣ ಮತ್ತು ಮಧ್ಯ ಕ್ಷೇತ್ರಗಳಿಂದ ಸಂಸದ ಸ್ಥಾನಕ್ಕೆ ಒಟ್ಟು 247 ಅಭ್ಯರ್ಥಿಗಳು (226 ಪುರುಷರು ಮತ್ತು 21 ಮಹಿಳೆಯರು) ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ 14 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಬಿಜೆಪಿ 11 ಸ್ಥಾನಗಳಲ್ಲಿ ಮತ್ತು ಮೂರು ಜೆಡಿಎಸ್ ಹಾಸನ, ಮಂಡ್ಯ ಮತ್ತು ಕೋಲಾರದಿಂದ ಸ್ಪರ್ಧಿಸುತ್ತಿವೆ.
Comments are closed.