ಕರಾವಳಿ

ಮನೆಯೆದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು | ಬೈಂದೂರಿನ ಶಿರೂರು ಬಳಿ ದುರ್ಘಟನೆ

Pinterest LinkedIn Tumblr

ಉಡುಪಿ: ಮನೆಯ ಗೇಟ್ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.

ಘಟನೆ ವಿವರ: ಶನಿವಾರ ತಡರಾತ್ರಿ ಸುರಿದ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ಈ ವೇಳೆ ವಿದ್ಯುತ್ ತಗುಲು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರೆತ ತಕ್ಷಣ ಈ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂ ಸಂಬಂದಪಟ್ಟವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಇರ್ಷಾದ್ ಕುರುಡಿ ಮೀನುಗಾರರಾಗಿದ್ದು ಬಹುತೇಕ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅವರು ಶನಿವಾರವಷ್ಟೇ ಮನೆಗೆ ಆಗಮಿಸಿದ್ದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇರ್ಷಾದ್ ಅವರ ಅಗಲುವಿಕೆಯಿಂದ ಬಡ ಕುಟುಂಬ ಕಂಗಾಲಾಗಿದೆ.

ಮೆಸ್ಕಾಂ ಬಗ್ಗೆ ಆಕ್ರೋಷ:
ಈ ಹಿಂದೆ ಹಲವು ಬಾರಿ ವಿದ್ಯುತ್ ಟ್ರಾನ್ಸ್‌ಪಾರ್ಮರ್ ಕಂಬ ತೆರವು‌ಮಾಡಿ ಸ್ಥಳಾಂತರಿಸುವಂತೆ‌ ಗ್ರಾ.ಪಂ ಹಾಗೂ ಸಂಬಂದಪಟ್ಟವರಿಗೆ ಮನವಿ ನೀಡಲಾಗಿತ್ತಾದರೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಮೆಸ್ಕಾಂ ಇಲಾಖೆ ಬೇಜವ್ದಾರಿತನದಿಂದ ಈ ಘಟನೆ ಸಂಬವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತರದ್ದು ಬಡ ಕುಟುಂಬವಾಗಿದ್ದು ಅವರಿಗೆ ಗರಿಷ್ಟ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Comments are closed.