ಬೆಂಗಳೂರು: ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದ ಆರೋಪದಲ್ಲಿದ್ದು ವಿದೇಶಕ್ಕೆ ತೆರಳಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಇತ್ತೀಚೆಗೆ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಲುಫ್ತಾನ್ಸ ಎಲ್ಎಚ್ 764 ವಿಮಾನದಲ್ಲಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿದ್ದು ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ಹಾಗೂ ಲುಕ್ ಔಟ್ ನೋಟಿಸ್ ಸಹ ಹೊರಡಿಸಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದು ಲೋಕಸಭೆ ಸ್ಪೀಕರ್ ಗೆ ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಿದ ಬಳಿಕ ಎಸ್ಐಟಿ ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ದಿದ್ದಾರೆ.
Comments are closed.