ಕುಂದಾಪುರ: ಅಪ್ರಾಪ್ತ ಬಾಲಕನ ಮೇಲೆ ದೂರದ ಸಂಬಂಧಿಗಳಾದ ನಾಲ್ವರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದ್ದು 28ರಂದು ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
(ಸಾಂದರ್ಭಿಕ ಚಿತ್ರ)
ಹಣಕಾಸು ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು ಪ್ರಕರಣದ ಹಿನ್ನೆಲೆ ಮೊಹಮ್ಮದ್ ಸಿನಾನ್, ರಿಜ್ವಾನ್, ಮಹಮ್ಮದ್ ಅಬಾನ್, ತೌಹೀದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ. 29ರಂದು ಎಫ್‌ಐಆರ್ ದಾಖಲಾಗಿತ್ತು.
ಹಲ್ಲೆ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ, ವೀಡಿಯೊವನ್ನು ಪ್ರಸಾರ ಮಾಡುವುದು ಅಪರಾಧವೇ ಅಥವಾ ಇಲ್ಲವೇ ಎಂದು ಕಾನೂನು ಅಭಿಪ್ರಾಯವನ್ನು ಪಡೆದು ವೀಡಿಯೊವನ್ನು ಪ್ರಸಾರ ಮಾಡುವವರ ಮೇಲೆ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ. ಮಾಹಿತಿ ನೀಡಿದರು.
Comments are closed.