ಕರ್ನಾಟಕ

ಲೋಕಸಭೆ ಚುನಾವಣೆ: ಕರ್ನಾಟಕ ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, ಜೆಡಿಎಸ್ 2, 9 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

Pinterest LinkedIn Tumblr

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕ ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಜೆಡಿಎಸ್ ಎರಡು ಸ್ಥಾನ ಹಾಗೂ ರಾಜ್ಯದ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.

ಪೆನ್ ಡ್ರೈವ್ ಹಗರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಸೋಲುಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಜಯಗಳಿಸಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್, ಡಾ.ಸುಧಾಕರ್, ವಿ.ಸೋಮಣ್ಣ ಸೇರಿದಂತೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿಯ ಕೆಲವು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಬಿ.ಶ್ರೀರಾಮುಲು ಸೋತಿದ್ದಾರೆ.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ಧ ಜಯಗಳಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳ ತವರು ಕ್ಷೇತ್ರವಾದ ಮೈಸೂರಿನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಕಳೆದುಕೊಂಡಿದೆ. ಸಿಎಂ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ತಮ್ಮ ತವರು ಕ್ಷೇತ್ರಗಳ ಅಭ್ಯರ್ಥಿಯನ್ನು ಗೆಲ್ಲಿಸಲು ವಿಫಲವಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗುಲ್ಬರ್ಗ ಕ್ಷೇತ್ರದಲ್ಲಿ ಗೆದ್ದಿದ್ದಾರೆ.

 

Comments are closed.