ಉಡುಪಿ: ಮಣಿಪಾಲದಲ್ಲಿರುವ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುವ ಸಲುವಾಗಿ ಅಪಾರ್ಟ್ಮೆಂಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕು ಹೆರ್ಗಾ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಕೇರಳ, ತಿರುವನಂತಪುರ ಮೂಲದ ಸಿದ್ದಾರ್ಥ್ (22) ಎನ್ನುವಾತನನ್ನು ಬಂಧಿಸಲಾಗಿದೆ. ಅರೊಪಿಯಿಂದ 20 ಸಾವಿರ ರೂ. ಮೌಲ್ಯದ ಸುಮಾರು 388 ಗ್ರಾಂ ಗಾಂಜಾ, 45 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್‌ನನ್ನು ಜಪ್ತಿ ಮಾಡಲಾಗಿದೆ.
ಘಟನೆ ವಿವರ: ಜೂ.5 ರಂದು ಸಂಜೆ 5.00 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ನೇತೃತ್ವದಲ್ಲಿ ಪತ್ರಾಂಕಿತ ಅಧಿಕಾರಿ, ಉಡುಪಿ ತಾಲೂಕು ಅಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ಶಂಕರ ಹಾಗೂ ಮಣಿಪಾಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ, ಎಎಸ್‌ಐ ವಿವೇಕಾನಂದ, ಎಎಸ್‌ಐ ಶೈಲೇಶ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಸುಕುಮಾರ, ಅರುಣ ಕುಮಾರ್, ಚನ್ನೇಶ್, ಮಂಜುನಾಥರವರನ್ನೊಳಗೊಂಡ ತಂಡ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಅಪಾರ್ಟ್‌ಮೆಂಟ್ ರೂಮ್ ಮೇಲೆ ದಾಳಿ ಮಾಡಿದ್ದು ರೂಮ್‌ನಲ್ಲಿದ್ದ ಸಿದ್ದಾರ್ಥನನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿಯಿಂದಲೇ ಕೃತ್ಯ: ಈ ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಗಾಂಜಾವನ್ನು ಈ ವಿದ್ಯಾರ್ಥಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡು ಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.