ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾದ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಎನ್‌ಡಿಎ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಪಡೆದುಕೊಂಡಿದ್ದು, 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಹೊಂದಿದೆ.
ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನರೇಂದ್ರ ಮೋದಿ ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ರಾಷ್ಟ್ರಪತಿ ಭೇಟಿಗೂ ಮುನ್ನ ಹಂಗಾಮಿ ಪ್ರಧಾನಿ ಮೋದಿ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಹಂಗಾಮಿ ಪ್ರಧಾನಿ ಮೋದಿ ಬೆಂಬಲಿಗ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು.
Comments are closed.