ಮೈಸೂರು: ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸವರು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಕಾನೂನಿನ ಪ್ರಕಾರ ಹೇಗೆ ತನಿಖೆಯಾಗಬೇಕು ಹಾಗೆ ಆಗುತ್ತದೆ, ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ.
ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕಿರುವ ನಿರ್ಧಾರದ ಹಿಂದಿನ ಉದ್ದೇಶ ನನಗೂ ತಿಳಿದಿಲ್ಲ. ಪೊಲೀಸರು ನನಗೆ ಮಾಹಿತಿ ನೀಡಿ ತೀರ್ಮಾನ ಮಾಡಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಸಾಮಾನ್ಯ ಜನ ಹೇಗೆ ಹೇಳುತ್ತಾರೊ ಹಾಗೆ ಕೇಳುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Comments are closed.