ಕುಂದಾಪುರ: ಹಣ್ಣು ತುಂಬಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಹುಬ್ಬಳ್ಳಿಯಿಂದ ಉಡುಪಿಯತ್ತ ಸಾಗುತ್ತಿದ್ದ ವಾಹನ ಚಾಲಕನ ನಿಯಂತ್ರ ತಪ್ಪಿ ಮಧ್ಯ ರಸ್ತೆಯಲ್ಲಿ ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
ಬ್ಯಾರಿಕೇಡ್ ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಲ್ಲಿ ಜಾಹೀರಾತಿನ ಬ್ಯಾರಿಕೃಡ್ ಅಳವಡಿಸಿದ್ದು ಚಾಲಕನಿಗೆ ಗೊಂದಲವುಂಟಾಗಿ ವಾಹನ ಪಲ್ಟಿಯಾದ ಘಟನೆಗೆ ಕಾರಣವೆನ್ನಲಾಗಿದೆ. ರಸ್ತೆಯ ಮಧ್ಯದಲ್ಲಿ ಅವೈಜ್ಞಾನಿಕವಾಗಿ ಬ್ಯಾರಿಕೇಡ್ ಅಳವಡಿಸಿದ್ದರಿಂದ ರಾತ್ರಿಯ ವೇಳೆ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ವೈಜ್ಞಾನಿಕ ರೀತಿಯಲ್ಲಿ ಬ್ಯಾರಿಕೇಡ್ ಅಳವಡಿಸುವುದು ಮತ್ತು ರಾತ್ರಿಯ ವೇಳೆ ಬ್ಯಾರಿಕೇಡ್ ರಸ್ತೆಯಿಂದ ತೆರವು ಮಾಡಬೇಕೆಂದು ಸ್ಥಳೀಯರು ಹಾಗೂ ಚಾಲಕರು ಮನವಿ ಮಾಡಿದ್ದಾರೆ.
Comments are closed.