ಕರಾವಳಿ

ಉಡುಪಿಯ ಮನೆಯಲ್ಲಿ ಬೆಂಕಿ ಅವಘಡ ಪ್ರಕರಣ: ಹೊಟೇಲ್ ಉದ್ಯಮಿಯ ಪತ್ನಿ ಚಿಕಿತ್ಸೆ ಫಲಿಸದೆ ಸಾವು

Pinterest LinkedIn Tumblr

ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ಮೃತಪಟ್ಟಿದ್ದಾರೆ.

ಬೆಂಕಿ ಅವಘಡದಲ್ಲಿ ಇವರ ಪತಿ ರಮಾನಂದ ಶೆಟ್ಟಿ ಜು.15ರ ಸೋಮವಾರ ಸಾವನ್ನಪ್ಪಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಅಶ್ವಿನಿ ಶೆಟ್ಟಿ ಅವರು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕವಾಗಿ ಕ್ರಿಯಾಶೀಲರಾಗಿದ್ದರು. ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಬಂಟರ ಸಂಘದಲ್ಲಿದ್ದರು. ತುಳುನಾಡಿನ ಆಚಾರ-ವಿಚಾರಗಳನ್ನು ಬಿಂಬಿಸುವ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.

ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಸೋಮವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

 

Comments are closed.