ಕರ್ನಾಟಕ

ಸುದ್ದಿಗೋಷ್ಠಿ ವೇಳೆ ಕುಮಾರಸ್ವಾಮಿ ಮೂಗಿನಿಂದ ರಕ್ತ ಸೋರಿಕೆ; ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ಮುಡಾ ಹಗರಣದ ಕುರಿತಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೋರಾಟದ ರೂಪುರೇಷೆ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಾತನಾಡುತ್ತಿದ್ದ ವೇಳೆ ಅವರ ಮೂಗಿನಿಂದ ರಕ್ತ ಸುರಿದಿದೆ.

File photo

ಕುಮಾರಸ್ವಾಮಿ ಮಾತನಾಡುತ್ತಿದ್ದಾಗ ಅವರ ಮೂಗಿನಿಂದ ಏಕಾಏಕಿ ರಕ್ತ ಸುರಿದಿದೆ. ಮೊದಲು ತಮ್ಮ ಬಳಿ ಇರುವ ಟವೆಲ್‌ನಿಂದ ಹೆಚ್‌ಡಿಕೆ ರಕ್ತ ಒರೆಸಿಕೊಂಡಿದ್ದಾರೆ. ಆದರೆ ಮತ್ತೆ ಜಾಸ್ತಿ ರಕ್ತ ಬಂದು, ಅವರ ಬಿಳಿ ಶರ್ಟ್‌ನ ಮೇಲೆ ಬಿದ್ದಿದೆ. ಈ ವೇಳೆ ಹೆಚ್‌ಡಿ ಕುಮಾರಸ್ವಾಮಿ, ಅಲ್ಲದೇ ಅವರ ಬಳಿಯೇ ಇದ್ದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅಲ್ಲಿದ್ದವರೆಲ್ಲ ಗಾಬರಿಯಾಗಿದ್ದಾರೆ.

ಕೂಡಲೇ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಆತಂಕದ ಅಗತ್ಯವಿಲ್ಲ‌ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.