ಕರಾವಳಿ

ಕೊರಗ ಸಮುದಾಯದಿಂದ ಉಡುಪಿ ಡಿಸಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆ: ಸ್ಥಳಕ್ಕೆ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭೇಟಿ

Pinterest LinkedIn Tumblr

ಉಡುಪಿ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ವತಿಯಿಂದ ಕೊರಗ ಸಮುದಾಯದ ಜನರ ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು.

ಸಮುದಾಯದ ಬೇಡಿಕೆಗಳ ಬಗ್ಗೆ ಮುಖಂಡರೊಂದಿಗೆ ಮಾತುಕತೆ ನಡೆಸಿದ ಅವರು ಕೊರಗ ಸಮುದಾಯದ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಪ್ರಾಮಾಣಿಕವಾಗಿ ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಯತ್ನಿಸುತ್ತೇನೆ ಎಂದು ಶಾಸಕರು ಭರವಸೆ ನೀಡಿದರು.

ಇದೆ ವೇಳೆ ಸಮುದಾಯದ ಪ್ರಮುಖರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚರ್ಚೆನಡೆಸಿದ ಅವರು, ಅತೀ ಶೀಘ್ರದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಎಲ್ಲಾ ಶಾಸಕರು ಜೊತೆಗೂಡಿ ಬೇಡಿಕೆಗಳ ಈಡೇರಿಕೆಯ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

Comments are closed.