ಉಡುಪಿ: ನಿವೃತ್ತ ಪೊಲೀಸ್ ನಿರೀಕ್ಷಕ ಎಂ.ಜಯಂತ್(61) ಇಂದು ಹೃದಯಾಘಾತದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು 1992ರಲ್ಲಿ ಪೊಲೀಸ್ ಇಲಾಖೆಗೆ ಸೆರ್ಪಡೆಗೊಂಡು ಮಣಿಪಾಲ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ಆರಂಭಿ ಸಿದರು. ಬಳಿಕ ವಿವಿಧ ಹಂತಗಳಲ್ಲಿ ಭಡ್ತಿ ಹೊಂದಿ ಉಡುಪಿ ಮಹಿಳಾ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ನಿವೃತ್ತರಾಗಿದ್ದರು.
ಕೊಲ್ಲೂರು, ಸಂಚಾರಿ ಠಾಣೆ, ಶಿರ್ವ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ಹೆಬ್ರಿ ಮೂಲದ ಇವರು ಸಾಸ್ತಾನದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Comments are closed.