ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವೆ ವೇಳೆ ಹೃದಯಸ್ತಂಭನದಿಂದ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ಸಿ.ಕೆ. ರವಿಚಂದ್ರನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕುರ್ಚಿಯಿಂದ ಕುಸಿದು ಬಿದ್ದ ರವಿಚಂದ್ರನ್ ಅವರನ್ನು ಆಂಬುಲೆನ್ಸ್‌ನಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ..
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರನ್ ಕುಸಿದುಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.
Comments are closed.