ಕರಾವಳಿ

21 ವರ್ಷಗಳಿಂದ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದನಕಳವು ಆರೋಪಿಯ ಬಂಧನ

Pinterest LinkedIn Tumblr

ಉಡುಪಿ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಅರೋಪಿ. 1993ರ ಜು. 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ. ಅವರ ಗದ್ದೆಯ ಬಳಿ ಮೇಯಲು ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಅನಂತರ ಆತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್‌ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ಅವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್‌ ಠಾಣಾ ಸಿಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಆ. 24ರಂದು ಕಟಪಾಡಿಯ ಮಣಿಪುರ ಗುಜ್ಜಿ ಹೌಸ್‌ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Comments are closed.