ಕರ್ನಾಟಕ

ರಾಯಚೂರು-ಮಾನ್ವಿ: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ದುರ್ಮರಣ

Pinterest LinkedIn Tumblr

ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಸೆ.5 ಗುರುವಾರ ನಡೆದಿದೆ.

ಘಟನೆಯ ತೀವ್ರತೆಗೆ ನಾಲ್ಕೈದು ಮಕ್ಕಳ ಕಾಲುಗಳು ಗಂಭೀರ ಗಾಯವಾಗಿದ್ದು ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಾನ್ವಿ ಹೊರ ವಲಯದ ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸುತ್ತಲಿನ ಹಳ್ಳಿಗಳಿಂದ‌ ಮಕ್ಕಳನ್ನು ಬಸ್ ಮೂಲಕ ನಿತ್ಯ ಕರೆ‌ ತರುವಾಗ‌ ರಾಯಚೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ಸಿಎಂ ಸಿದ್ದರಾಮಯ್ಯ ಭರವಸೆ:
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.

Comments are closed.