ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಸೆ.14 ರಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಂದಾಪುರ ಗುಲ್ವಾಡಿಯ ಮೊಹಮ್ಮದ್ ಸೀನಾನ್ (19) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರತೇಜ್ ನಿರ್ದೇಶನದಂತೆ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಪಿಎಸ್ಐ ಹರೀಶ್ ಆರ್., ತನಿಖಾ ಪಿಎಸ್ಐ ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ರಾಜು ನಾಯ್ಕ, ಶಾಂತರಾಮ ಶೆಟ್ಟಿ, ರಾಘವೇಂದ್ರ ಮೊದಲಾದವರಿದ್ದರು.
Comments are closed.