ಕುಂದಾಪುರ: ಶಾಲಾವಾಹನವೊಂದು ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಟ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ಶಾಲಾವಾಹನದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇದ್ದಿದ್ದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.
ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.