ಕರ್ನಾಟಕ

ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿ ರಾಜ್ಯ ಸರಕಾರ ಆದೇಶ

Pinterest LinkedIn Tumblr

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರಿ ಶನಿವಾರ(ಸೆ.21) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಆರೋಪಿ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯವು ಮುನಿರತ್ನ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೇ ಸರಕಾರದಿಂದ ಈ ಪ್ರಕಟಣೆ ಹೊರಬಿದ್ದಿದೆ.ತನಿಖಾ ತಂಡದಲ್ಲಿ ಮೂವರು ಐಪಿಎಸ್ ಅಧಿಕಾರಿಗಳಾದ ಲಾಭು ರಾಮ್, ಸೌಮ್ಯಲತಾ ಎಸ್ ಕೆ ಮತ್ತು ಸಿ.ಎ. ಸೈಮನ್ ಇದ್ದಾರೆ.

ಮುನಿರತ್ನ ವಿರುದ್ಧದ ಮೂರು ಪ್ರಕರಣಗಳು ಮಾತ್ರವಲ್ಲದೆ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಮುನಿರತ್ನ ಅವರ ಬಗ್ಗೆ ದಾಖಲಾಗಿರುವ ಮತ್ತು ದಾಖಲಾಗಬಹುದಾದ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ತಂಡಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Comments are closed.