ಉಡುಪಿ: ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಈಚರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದ ಘಟನೆ ಸೆ.30 ಸೋಮವಾರ ನಡೆದಿದ್ದು ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮೀಕ್ಷಾ (7) ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಚರ್ ಲಾರಿಯ ಚಾಲಕ ಅತೀ ವೇಗ ಹಾಗೂ ಅಜಾರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕರಾದ ಸುರೇಶ, ಸುಮೀಕ್ಷಾ, ಸುಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಶ್ಮಿತಾ ಹಾಗೂ ಮೀನಾಕ್ಷಿ ಅವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಸಾಗಿಸಿದ್ದು, ಶುಶ್ಮಿತಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಮೀನಾಕ್ಷಿಯವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಆರೋಪಿ ಇಚರ್ ಚಾಲಕ ಹೇಮಂತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Comments are closed.