ಕರಾವಳಿ

ವಿಧಾನ ಪರಿಷತ್‌ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಸ್. ರಾಜು ಪೂಜಾರಿ

Pinterest LinkedIn Tumblr

ಉಡುಪಿ: ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಸಹಕಾರಿ ಧುರೀಣ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಬೈಂದೂರು ಮೂಲದ ಎಸ್. ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ರಾಜು ಪೂಜಾರಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕ್ಷೇತ್ರವು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿಯು ಕಿಶೋರ್‌ ಕುಮಾರ್‌ ಬೊಟ್ಯಾಡಿಯವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ನಾಮಪತ್ರ ಸಲ್ಲಿಕೆಗೆ ನಾಳೆ (ಅ. 3) ಕೊನೆ ದಿನವಾಗಿದೆ.

Comments are closed.