ಕುಂದಾಪುರ: ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ತಾಲೂಕು ಸಮಿತಿ ಕುಂದಾಪುರ-ಬೈಂದೂರು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಏಳು ಗ್ರಾಮಗಳನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮಗಳ ನೈರ್ಮಲ್ಯಗಳನ್ನು ಕಾಪಾಡುತ್ತ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವಲ್ಲಿ ಸೇನಾನಿಗಳಂತೆ ತಮ್ಮನ್ನು ತೊಡಗಿಸಿಕೊಂಡಿರುವ ರಾಜ್ಯಕ್ಕೆ ಮಾದರಿ ಘಟಕವಾಗಿರುವ ವಂಡ್ಸೆ ಎಸ್.ಎಲ್.ಆರ್.ಎಂ ಘಟಕದ ಮೇಲ್ವಿಚಾರಕಿ ಶ್ವೇತಾ ಹಾಗೂ ಕಾರ್ಯದರ್ಶಿ ಅಶ್ವಿನಿ ಅವರನ್ನು ಜಿಲ್ಲಾ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಹಾಗೂ ಉಳಿದ ಎಲ್ಲಾ ಸಿಬ್ಬಂದಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್., ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ವಂಡ್ಸೆ ವಲಯ ಸಿ.ಆರ್.ಪಿ ನಾಗರಾಜ್ ಶೆಟ್ಟಿ ಗೌರವಿಸಿ ಅಭಿನಂದಿಸಿದರು. ಎಸ್.ಎಲ್.ಆರ್.ಎಂ ಘಟಕದ ಉಸ್ತುವಾರಿಗಳು ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು, ಪತ್ರಿಕಾ ಕಾರ್ಯದರ್ಶಿ ಶಶಿ ಬಳ್ಕೂರು, ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸಾಧಿಕ್ ಮಾವಿನಕಟ್ಟೆ, ಕುಂದಾಪುರ ಪುರಸಭಾ ಘಟಕದ ಕಾರ್ಯದರ್ಶಿ ವರದ ಆಚಾರ್ಯ ಅಂಕದಕಟ್ಟೆ ಉಪಸ್ಥಿತರಿದ್ದರು. ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್.ವಿ. ನಾಗರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
Comments are closed.