ಕರಾವಳಿ

ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನವಾದ 256 ಗ್ರಾಂ ಚಿನ್ನಾಭರಣಗಳು ವಶಕ್ಕೆ!

Pinterest LinkedIn Tumblr

ಕುಂದಾಪುರ: ಗಂಗೊಳ್ಳಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಕಳವಾಗಿದ್ದ 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನದ ಆಭರಣಗಳನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಆರೋಪಿ ದೇವಸ್ಥಾನದ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್ (43) ಎಂಬಾತನನ್ನು ಬಂಧಿಸಿ ಆತನನ್ನು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ತನ್ನ ಸ್ವಂತಕ್ಕಾಗಿ ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದು ಈ ಬ್ಯಾಂಕ್‌ ಹಾಗೂ ಸೊಸೈಟಿಗಳಲ್ಲಿ ಜಪ್ತಿ ಮಾಡಿದ 20 ಲಕ್ಷ 48 ಸಾವಿರ ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳ ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳ ದೇವಸ್ಥಾನದಲ್ಲಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ಬಗ್ಗೆ ಗಂಗೊಳ್ಳಿ ಠಾಣಾ ಉಪನಿರೀಕ್ಷಕರಾದ ಹರೀಶ್‌ ಆರ್‌., ಬಸವರಾಜ ಕನಶೆಟ್ಟಿ, ಸಿಬ್ಬಂದಿಗಳಾದ ನಾಗರಾಜ, ಶಾಂತರಾಮ ಶೆಟ್ಟಿ , ರಾಘವೇಂದ್ರ, ಸಂದೀಪ ಕುರಣಿ ಹಾಗೂ ಚಾಲಕ ದಿನೇಶ ಅವರ ತಂಡ ಕಾರ್ಯಾಚರಣೆ ನಡೆಸಿದ್ದರು.

Comments are closed.