ಕರಾವಳಿ

ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ 30ಕ್ಕೂ ಅಧಿಕ ಮೊಬೈಲ್‌ಪೋನ್‌ಗಳನ್ನು ಮರಳಿ ವಾರೀಸುದಾರರಿಗೆ ನೀಡಿದ ಪೊಲೀಸರು

Pinterest LinkedIn Tumblr

ಉಡುಪಿ: ನಗರ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಸುಮಾರು 30ಕ್ಕೂ ಅಧಿಕ ಮೊಬೈಲ್‌ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪೊಲೀಸರು ಪತ್ತೆ ಹಚ್ಚಿದ್ದು, ಅವುಗಳನ್ನು ವಾರಿಸುದಾರರಿಗೆ ನಗರ ಠಾಣೆಯ ಮುಂಭಾಗದಲ್ಲಿ ಹಸ್ತಾಂತರಿಸಲಾಯಿತು.

ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ.ಮಾತನಾಡಿ, ಮೊಬೈಲ್‌ ಕಳವಾದರೆ ಅದನ್ನು ಪತ್ತೆಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿಪಡಿಸಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾಹಿತಿ ಇಲ್ಲದವರು ಸ್ಥಳೀಯ ಠಾಣೆಗೆ ಭೇಟಿ ನೀಡಿ, ಅಲ್ಲಿಯೂ ದೂರು ದಾಖಲಿಸಬಹುದು ಎಂದರು.

ನಗರ ಠಾಣೆಯ ಪೊಲೀಸ್‌ ನಿರೀಕ್ಷಕ ಶ್ರೀಧರ್‌ ಸತಾರೆ, ಪಿಎಸ್‌ಐಗಳಾದ ಈರಣ್ಣ ಶಿರಗುಂಪಿ, ಭರತೇಶ್‌, ಪುನೀತ್‌, ಸಿಬಂದಿ ಚೇತನ್‌, ಬಶೀರ್‌, ವಿನಯ್ ಉಪಸ್ಥಿತರಿದ್ದರು

Comments are closed.