ಬೆಂಗಳೂರು: ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಟೆಕ್ಕಿಯ ಪತ್ನಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 24 ಪುಟಗಳ ಆತ್ಮಹತ್ಯೆ ಪತ್ರ ಬರೆದಿಟ್ಟು ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸುಭಾಷ್ ಸಹೋದರ ವಿಕಾಸ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ, ಅತ್ತೆ ನಿಶಾ, ಸೋದರ ಮಾವ ಅನುರಾಗ್, ಚಿಕ್ಕಪ್ಪ ಸುಶೀಲ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅತುಲ್ ಸುಭಾಷ್ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ನಾಲ್ವರು 3 ಕೋಟಿ ರೂ.ಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
Comments are closed.