ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್ ಪೀಠ ಆದೇಶಿಸಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ (ಡಿ.13) ಈ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ, ಇತರ ಆರೋಪಿಗಳಾದ ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಷ್ ಎನ್ನುವರಿಗೆ ಆರು ತಿಂಗಳ ಬಳಿಕ ಜಾಮೀನು ದೊರೆತಿದೆ.
ಅನಾರೋಗ್ಯದ ಕಾರಣದಿಂದ ನಟ ದರ್ಶನ್ ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದೀಗಾ ರೆಗ್ಯುಲರ್ ಬೇಲ್ ನೀಡಲಾಗಿದೆ. ಪ್ರಾಸಿಕ್ಯೂ ಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರೆ, ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಾಡಿದ್ದರು
Comments are closed.