ಉಡುಪಿ: ಅಕ್ರಮ ಗೋವಾ ಮದ್ಯ ಮಾರಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ದಯಾನಂದನನ್ನು ಕೇರಳದ ತ್ರಿಶ್ಯೂರು ಜಿಲ್ಲೆಯ ಚಾಲಕುಡಿಯಲ್ಲಿರುವ ಆತನ ಮನೆಯಿಂದಲೇ ಉಡುಪಿ ಸೆನ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2009ರಲ್ಲಿ ಇಂದ್ರಾಳಿ ರೈಲು ನಿಲ್ದಾಣದ ಬಳಿ ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ದಯಾನಂದನನ್ನು ಅಂದಿನ ಜಿಲ್ಲಾ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಇನ್ಸ್ಪೆಕ್ಟರ್ ಸಿ.ಇ. ತಿಮ್ಮಯ್ಯ ಮತ್ತು ಸಿಬಂದಿ ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಆತ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿ ವಿರುದ್ಧ ಎಲ್ಪಿಸಿ ವಾರಂಟನ್ನು ಹೋರಡಿಸಿತ್ತು.
ಉಡುಪಿ ಸೆನ್ ಪೊಲೀಸ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ಮತ್ತು ಪಿಎಸ್ಐ ಪವನ್ ಕುಮಾರ್, ಪಡುಬಿದ್ರಿ ಪೊಲೀಸ್ ಠಾಣಾ ಎಎಸ್ಐ ರಾಜೇಶ್, ಸೆನ್ ಠಾಣಾ ಸಿಬ್ಬಂದಿಗಳಾದ ಪ್ರವೀಣ ಕುಮಾರ್ ಮತ್ತು ದೀಕ್ಷಿತ್ ಅವರನ್ನು ಒಳಗೊಂಡ ತಂಡ ಆರೋಪಿ ದಯಾನಂದನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಡಿ.30ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
Comments are closed.