ಕರಾವಳಿ

ತ್ರಾಸಿಯಲ್ಲಿ ಸಮುದ್ರ ಪಾಲಾಗಿದ್ದ ಜೆಟ್ ಸ್ಕೀ ರೈಡರ್ ‌ಮೃತದೇಹ 36 ಗಂಟೆಯ ಬಳಿಕ ಪತ್ತೆ

Pinterest LinkedIn Tumblr

ಕುಂದಾಪುರ: ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಟ್ ಸ್ಕಿ ರೈಡರ್ ರೋಹಿದಾಸ್ ಯಾನೆ ರವಿ (41) ಮೃತದೇಹ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ.

ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿ, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿ ಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು.

ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆಎನ್ಡಿ ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ.

Comments are closed.