ಪ್ರಮುಖ ವರದಿಗಳು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

Pinterest LinkedIn Tumblr

ಹೊಸದಿಲ್ಲಿ: ಡಿ.26 ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.

ಈ ಬಗ್ಗೆ ರಾಬರ್ಟ್‌ ವಾದ್ರಾ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

ಮನ್‌ಮೋಹನ್‌ ಸಿಂಗ್ ಅವರು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರವಿದ್ದರು ಮತ್ತು 2024ರ ಆರಂಭದಿಂದಲೂ ಅವರ ಆರೋಗ್ಯ ಚೆನ್ನಾಗಿರಲಿಲ್ಲ. 2024ರ ಜನವರಿಯಲ್ಲಿ ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಪುತ್ರಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದರು.

Comments are closed.