ತುಮಕೂರು: ದೂರುದಾರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಅಮಾನತುಗೊಂಡಿರುವ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಮಧುಗಿರಿ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಡಿವೈಎಸ್ಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಎನ್ ಎಸ್ 68, 75, 79 ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ: ಜಾಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಮಹಿಳೆಯನ್ನು ಪುಸಲಾಯಿಸಿ ಏಕಾಂತದ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದು ವಿಡಿಯೋದಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ. 4 ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು ವೈರಲ್ ಆದ ವಿಡಿಯೋದಿಂದ ತಡವಾಗಿ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಪ್ಪನನ್ನು ಡಿಜಿ ಮತ್ತು ಐಜಿ ಡಾ.ಅಲೋಕ್ ಮೋಹನ್ ಅಮಾನತುಗೊಳಿಸಿ ಶುಕ್ರವಾರ ಆದೇಶಿಸಿದ್ದರು. ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಕೊಂಡಿದ್ದ ಮಧುಗಿರಿ ಪೊಲೀಸರು ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.
Comments are closed.