ಮಣಿಪಾಲ: ಸಹಸವಾರನನ್ನು ಅಪಾಯಕರ ರೀತಿಯಲ್ಲಿ ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿದ ಸವಾರ ಆಶಿಕ್ ಎಂಬಾತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನೋರ್ವ ದ್ವಿಚಕ್ರ ವಾಹನದಲ್ಲಿ ಮಣಿಪಾಲ ಈಶ್ವರ ನಗರದಿಂದ ವಿದ್ಯಾರತ್ನ ನಗರದ ಕಡೆಗೆ ತೆರಳುವ ರಸ್ತೆಯಲ್ಲಿ ಅಪಾಯ ತರುವ ರೀತಿಯಲ್ಲಿ ಚಲಾಯಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರದಾಡಿತ್ತು. ಆತನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಠಾಣಾ ಪಿ.ಐ ದೇವರಾಜ್ ಟಿ.ವಿ ನೇತೃತ್ವದಪೊಲೀಸ್ ಉಪ ನಿರೀಕ್ಷಕರಾದ ಅನೀಲ್, ಅಕ್ಷಯ ಕುಮಾರಿ, ಸಿಬ್ಬಂದಿಗಳಾದ ವಿವೇಕ್, ಪ್ರಸನ್ನ, ಇಮ್ರಾನ್, ಸುರೇಶ್ ಶೆಟ್ಟಿ ಹಾಗೂ ಸುಕುಮಾರ್ ಶೆಟ್ಟಿ ರುದ್ರವ್ವ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಆತ್ರಾಡಿ ನಿವಾಸಿ ಮಹಮ್ಮದ್ ಆಶಿಕ್(19) ಬಂಧಿಸಿ ಸ್ಕೂಟರ್ ವಶಪಡಿಸಿಕೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.