ಕರಾವಳಿ

ಮರವಂತೆ ಬೀಚ್ ಬಳಿ ಮಾದಕ ವಸ್ತು ಎಂಡಿಎಂಎ ಸಹಿತ ಐವರು ಆರೋಪಿಗಳನ್ನು ಬಂಧಿಸಿದ ಉಡುಪಿ‌‌ ಸೆನ್ ಠಾಣೆ ಪೊಲೀಸರು

Pinterest LinkedIn Tumblr

ಕುಂದಾಪುರ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ಐದು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಟ್ಕಳ ಮೂಲದವರಾದ ಅಬ್ರಾರ್‌ ಶೇಖ್ (22), ಮೊಹಮ್ಮದ್‌ ಇಸ್ಮಾಯಿಲ್‌ ಫರ್ಹಾನ್(25),  ಮೊಹಮ್ಮದ್‌ ಜಿಯಾಮ್‌ ಬೆಳ್ಳಿ (26), ನೌಮನ್(27), ಹೊನ್ನಾವರ ಕಾಸರಕೋಡ್ ಮೂಲದ ಸಜ್ಜಾದ್‌ ಮುಸ್ತಕೀಮ್‌ ಕೆವಾಕ(21) ಬಂಧಿತರು.

ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ 15. 59 ಮಿಲಿ ಗ್ರಾಂ ತೂಕದ 78 ಸಾವಿರ ರೂ. ಮೊತ್ತದ ಎಂಡಿಎಂಎ ಮಾದಕ ವಸ್ತು, ಆಪಾದಿತರು ಬಳಸಿದ್ದ 5 ಮೊಬೈಲ್‌, ಮಾದಕ ವಸ್ತು ಮಾರಾಟಕ್ಕೆ ಬಳಸಿದ ಕಾರು ಸಹಿತ 11,28,000 ರೂ. ಮೊತ್ತದ ಸೊತ್ತುಗಳ ಸಹಿತ 12 ಲಕ್ಷದ 56 ಸಾವಿರ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಉಡುಪಿ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್, ಸಿಬ್ಬಂದಿಗಳಾದ ಪ್ರವೀಣ್ ಕುಮಾರ್‌, ಪ್ರವೀಣ್‌, ರಾಜೇಶ್ , ದಿಕ್ಷೀತ್, ನಿಲೇಶ್, ಮಾಯಪ್ಪ ಗಡದೆ ಮತ್ತು ಸುದೀಪ್ ರವರ ತಂಡ ಭಾಗವಹಿಸಿದ್ದರು.

ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.