ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಎಚ್.ಡಿ ಕುಲಕರ್ಣಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಎಚ್.ಡಿ. ಕುಲಕರ್ಣಿ ಅವರು 1998ನೇ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿದ್ದು ಉಡುಪಿ ಜಿಲ್ಲೆ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಕಳೆದ 4 ವರ್ಷಗಳ ಹಿಂದೆ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿ ಬೆಂಗಳೂರು ಗ್ರಾಮಾಂತರ ಸೈಬರ್ ಕ್ರೈಮ್ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದರು. ನಂತರ ಬೆಂಗಳೂರು ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದ ಇವರನ್ನು ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು.
ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಹಿಂದಿನ ಡಿವೈಎಸ್ಪಿ ಆಗಿ ಕೆ.ಯು ಬೆಳ್ಳಿಯಪ್ಪ ಇದ್ದರು. ಕುಂದಾಪುರ ಪೊಲೀಸ್ ಉಪವಿಭಾಗವು ಕುಂದಾಪುರ ನಗರ, ಸಂಚಾರ ಠಾಣೆ ಸಹಿತ ಬೈಂದೂರು ವೃತ್ತ ನಿರಿಕ್ಷಕರ ವ್ಯಾಪ್ತಿಯಲ್ಲಿ ಬೈಂದೂರು, ಕೊಲ್ಲೂರು ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆ ಮತ್ತು ಶಂಕರನಾರಾಯಣ ವೃತ್ತ ವ್ಯಾಪ್ತಿಗೆ ಕುಂದಾಪುರ ಗ್ರಾಮಾಂತರ, ಅಮಾಸೆಬೈಲು ಹಾಗೂ ಶಂಕರನಾರಾಯಣ ಠಾಣೆ ಒಳಪಡುತ್ತದೆ.
Comments are closed.