ಕರಾವಳಿ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಶಂಕಿತ ಆರೋಪಿಯ ಫೋಟೋ ರಿಲೀಸ್ | ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Pinterest LinkedIn Tumblr

ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.

ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದರು.

ಪೊಲೀಸ್ ಪ್ರಕಟಣೆ: ಐದು ವರ್ಷದ ಬಾಲಕಿಯ ಲೈಂಗಿಕ ಕಿರುಕುಳ ಸಂಬಂಧ , ಇದು ಶಂಕಿತ ವ್ಯಕ್ತಿಯ ಫೋಟೋ. ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಕಂಟ್ರೋಲ್ ರೂಮ್ : 9480805400

ಪೊಲೀಸ್ ನಿರೀಕ್ಷಕರು,  ಮಹಿಳಾ ಠಾಣೆ : 9480805430

ಮಹಿಳಾ ಠಾಣೆ : 08202525599

ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ : 8277988949

Comments are closed.